ಕರ್ನಾಟಕ ಹಿಜಾಬ್‌ ವಿವಾದ: ವಿಚಾರಣೆ ನಾಳೆಗೆ ಮುಂದೂಡಿಕೆ; ಎಲ್ಲಾ ಶಾಲಾ- ಕಾಲೇಜುಗಳಿಗೆ 3 ದಿನಗಳ ರಜೆ ಘೋಷಣೆ



ಬೆಂಗಳೂರು: ಹಿಜಾಬ್‌-ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ವ್ಯಾಪಿಸಿದ್ದು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.

      ಉನ್ನತ ಶಿಕ್ಷಣ ಸಚಿವ ಸಿ.ಅಶ್ವತ್ತ ನಾರಾಯಣ ಅವರು ಹೇಳಿಕೆಯನ್ನು ನೀಡಿ ಶಾಂತಿ ಪಾಲನೆಗಾಗಿ ಎಲ್ಲಾ ವಿಶ್ವ ವಿದ್ಯಾನಿಲಯಗಳ ಅಧೀನದಲ್ಲಿ ಬರುವ ಪದವಿ ಕಾಲೇಜುಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ಹಾಗೂ ಹೈಸ್ಕೂಲ್‌ಗಳಿಗೆ ಮುಂದಿನ ಮೂರು ದಿನಗಳ ಕಾಲ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಯಾವುದೇ ಉದ್ರೇಕಕ್ಕೆ ಮುಂದಾಗಬಾರದು. ಎಲ್ಲರೂ ಶಾಂತಿ ಕಾಪಾಡಿಕೊಂಡು ಸಹಕರಿಸಬೇಕು ಎಂದು ಅವರು ಮನವಿ ಮಾಡಿಕೊಂಡರು.

      ಎಲ್ಲರೂ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಕರ್ನಾಟಕದ ಜನತೆಗೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿವರು ಹೇಳಿದ್ದಾರೆ.

      ಈ ಮಧ್ಯೆ ಹಿಜಾಬ್‌ ಧರಿಸಲು ಅವಕಾಶ ಮಾಡಿಕೊಡಬೇಕು ಎಂಬುದರ ಕುರಿತಾದ ಅರ್ಜಿದಾರರ ವಾದ ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

No comments:

Powered by Blogger.
google.com, pub-6640921760405904, DIRECT, f08c47fec0942fa0