ಕೆಲವು ದಿನಗಳ ಹಿಂದೆ ಬಂದಿದ್ದ ಸಬ್ ಇನ್ಸ್ ಪೆಕ್ಟರ್ ಹುದ್ದೆ‌ ನೇಮಕಾತಿಗೆ ತಡೆ

ಬೆಂಗಳೂರು(08-02-2022) : ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.
ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಅವರು ರಾಜ್ಯದ ಹಿರಿಯ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ.
545 ಪಿಎಸ್ ಐ ಹುದ್ದೆಗಳ ನೇಮಕಕ್ಕೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 371 (ಜೆ) ಮೀಸಲಾತಿಯಲ್ಲಿ ಅನ್ಯಾಯ ಮತ್ತು ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕೆಲ ಅಭ್ಯರ್ಥಿಗಳು ಆರೋಪಿಸಿದ್ದರು.
ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ.
ಇದೀಗ ಆಡಳಿತಾತ್ಮಕ ಕಾರಣದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರಗೆ ಸ್ಥಗತಗೊಳಿಸಬೇಕು ಎಂದು ತಿಳಿಸಲಾಗಿದೆ

No comments:

Powered by Blogger.
google.com, pub-6640921760405904, DIRECT, f08c47fec0942fa0